ಕುಮಟಾ: ಮೇ ತಿಂಗಳ ಮೊದಲ ವಾರದಲ್ಲಿ ನಡೆದ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ರವರು ನಡೆಸಿದ ಕಿಡ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2024 ರಲ್ಲಿ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸುಪ್ರಿಯಾ ಶಂಕರ ಗೌಡ ಭಾಗವಹಿಸಿ 600 ಮೀಟರ್ ಓಟದಲ್ಲಿ ದ್ವಿತೀಯ ಹಾಗೂ100 ಮೀಟರ್ ಓಟದಲ್ಲಿ ತೃತೀಯ ಸ್ಥಾನ
ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಊರಿಗೆ, ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿರುತ್ತಾಳೆ. ಕಳೆದ ಏಪ್ರಿಲ್ ತಿಂಗಳಲ್ಲಿ ನಡೆದ 17 ವರ್ಷದ ಒಳಗಿನ ಶಿಕ್ಷಣ ಇಲಾಖೆಯ ರಾಷ್ಟ್ರಮಟ್ಟದ ಕ್ರೀಡಾಕೂಟ ಬಿಹಾರದ ಪಾಟ್ನಾದಲ್ಲಿ ನಡೆದಾಗ
ರಾಜ್ಯವನ್ನು ಪ್ರತಿನಿಧಿಸಿ ಸ್ಪರ್ಧೆ ನೀಡಿದ್ದರು. ಈಗ ಮತ್ತೊಮ್ಮೆ ರಾಜ್ಯ ಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದರ ಮೂಲಕ ಅಥೆಟಿಕ್ಸ್ ವಿಭಾಗದಲ್ಲಿ ತನ್ನ ಛಾಪು ಮೂಡಿಸಿರುವುದು ಸಾಬೀತಂತಾಗಿದೆ. ಶಾಲೆಯ ಶಿಕ್ಷಕರ ಜೊತೆಗೆ ರಾಷ್ಟ್ರ ಮಟ್ಟದ ತರಬೇತುದಾರರಾದ ಜಿ ಡಿ ಭಟ್ ರಿಂದ ವಿಶೇಷ ತರಬೇತಿ ಪಡೆದಿರುತ್ತಾರೆ. ತಂದೆ ಶಂಕರ್ ಗೌಡ ಮತ್ತು ತಾಯಿ ಭಾರತಿ ಗೌಡ ತನ್ನ ಸಾಧನೆಯಲ್ಲಿ ಹೆಚ್ಚಿನ ಕಾಳಜಿ ಮತ್ತು ಪ್ರೋತ್ಸಾಹ ನೀಡಿದ್ದು ಇಷ್ಟೊಂದು ಸಾಧನೆ ಮಾಡಲು ಸಾಧ್ಯವಾಯಿತು ಎನ್ನುವುದು ವಿದ್ಯಾರ್ಥಿನಿಯ ಅಭಿಪ್ರಾಯ.
ಈಕೆಯ ಸಾಧನೆಗೆ ಕುಮಟಾ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯರು ಹಾಗೂ ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ರಾದ ಗಜಾನನ ಪೈ, ಹಾಲಕ್ಕಿ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಗೋವಿಂದ ಗೌಡ ಹಾಗೂ ವಿದ್ಯಾನಿಕೇತನ ಮೂರೂರು ಕಲ್ಲಬ್ಬೆ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ ಆರ್ ಜಿ ಭಟ್ಟ ಹಾಗೂ ಸರ್ವ ಸದಸ್ಯರು, ಪ್ರಾಚಾರ್ಯರಾದ ಜಿ.ಎಂ.ಭಟ್ಟ, ಮುಖ್ಯ ಶಿಕ್ಷಕರಾದ ವಿವೇಕ ಆಚಾರಿ ಹಾಗೂ ಶಿಕ್ಷಕ ವೃಂದ, ಸಹಪಾಠಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.