ಕುಮಟಾ : ತಾಲೂಕಿನ ಅಳ್ವೆಕೋಡಿಯಲ್ಲಿ ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ಅಪಘಾತ ಸಂಭವಿಸಿ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ತಾಲೂಕಿನ ಅಳ್ವೆಕೋಡಿಯಲ್ಲಿ ನಡೆದಿದೆ. ಕೆಲಕಾಲ ಸುತ್ತಮುತ್ತಲ ಜನರು ಭಯಭೀತರಾಗುವ ಘಟನೆ ಇದಾಗಿತ್ತು.

ಶಬರಿಮಲೆ ಯಾತ್ರೆಗೆ ಹೊರಟಿದ್ದ ಯಾತ್ರಾರ್ತಿಗಳು ಹೈದ್ರಾಬಾದ್ ಹಾಗೂ ಆಂಧ್ರ ಮೂಲದವರು ಎಂದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ. ಹತ್ತಕ್ಕೂ ಹೆಚ್ಚು ಜನರು ಈ ದುರ್ಘಟನೆಯಲ್ಲಿ ಗಾಯಗೊಂಡು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಬರಿಮಲೆ ಯಾತ್ರೆಗೆ ಕುಮಟಾ ಕಡೆಯಿಂದ ಹೊನ್ನಾವರ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಗೆ ಹೊನ್ನಾವರ ಕಡೆಯಿಂದ ಕುಮಟಾ ಕಡೆಗೆ ಬರುತ್ತಿದ್ದ ಕಾರುಗಳ ನಡುವೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು.
ಸ್ಥಳಕ್ಕೆ ಕುಮಟಾ ಪೊಲೀಸ್ರು ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸುಗಮಗೊಳಿಸಿದ್ದಾರೆ.
Leave feedback about this