ಕನ್ನಡ ಸೇರಿ 15 ಭಾಷೆಗಳಲ್ಲಿ ಕೇಂದ್ರ ಸರಕಾರದ ನೇಮಕಾತಿ ಪರೀಕ್ಷೆ
General News Karnataka Uttara Kannada

ಕನ್ನಡ ಸೇರಿ 15 ಭಾಷೆಗಳಲ್ಲಿ ಕೇಂದ್ರ ಸರಕಾರದ ನೇಮಕಾತಿ ಪರೀಕ್ಷೆ

ನವದೆಹಲಿ : ಕೇಂದ್ರ ಸರ್ಕಾರವು ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಮಾಡಿ ಪ್ರಾದೇಶಿಕ ಭಾಷೆಯನ್ನು ಅವಸಾನಕ್ಕೆ ತಳ್ಳುತ್ತಿದೆ ಎಂಬ ಆರೋಪದ ಬೆನ್ನಲ್ಲೇ ಕೇಂದ್ರ ಸರ್ಕಾರವು ಕನ್ನಡ ಸೇರಿದಂತೆ ೧೫ ಭಾಷಿಕರಿಗೆ ಸಿಹಿ ಸುದ್ದಿ ನೀಡಿದೆ. “ಯುವಕರು ಅವಕಾಶಗಳಿಂದ ವಂಚಿತರಾಗಬಾರದು ಎಂಬ ಕಾರಣಕ್ಕಾಗಿ ಸಿಬ್ಬಂದಿ ನೇಮಕಾತಿ ಆಯೋಗದ (SSC) ಪರೀಕ್ಷೆಗಳನ್ನು ಕನ್ನಡ (Kannada) ಸೇರಿ 15 ಭಾಷೆಗಳಲ್ಲಿ ನಡೆಸಲು ಇತ್ತೀಚೆಗೆ ಕೇಂದ್ರ ಸರ್ಕಾರ ತೀರ್ಮಾನಿಸಿದೆ” ಎಂದು ಕೇಂದ್ರ ಸಿಬ್ಬಂದಿ, ಕುಂದುಕೊರತೆಗಳು ಹಾಗೂ ಪಿಂಚಣಿ ಖಾತೆ ಸಹಾಯಕ ಸಚಿವ ಜಿತೇಂದ್ರ ಸಿಂಗ್‌ ಮಾಹಿತಿ ನೀಡಿದ್ದಾರೆ. ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಹಾಗೂ ಪಿಂಚಣಿಗಳ ಸಚಿವಾಲಯದ 14ನೇ ಹಿಂದಿ ಕನ್ಸಲ್ಟೇಟಿವ್‌ ಸಮಿತಿ ಸಭೆಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು. “ಇಂಗ್ಲಿಷ್‌, ಹಿಂದಿ ಜತೆಗೆ 15 ಭಾಷೆಗಳಲ್ಲಿ ಎಸ್‌ಎಸ್‌ಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಈ ಕುರಿತು ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಯುವಕರು ಅವಕಾಶಗಳಿಂದ ವಂಚಿತರಾಗಬಾರದು ಎಂಬ ಕಾರಣಕ್ಕಾಗಿ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ತಿಳಿಸಿದರು. ಇದರಿಂದ ಭಾಷೆಯ ಸಮಸ್ಯೆ ಎದುರಿಸುತ್ತಿದ್ದ ಕನ್ನಡಿಗರಿಗೆ ಕನ್ನಡದಲ್ಲೇ ಪರೀಕ್ಷೆ ಬರೆದು ಉದ್ಯೋಗ ಪಡದುಕೊಳ್ಳಲು ಅನುಕೂಲಾಗಲಿದ್ದು ಭವಿಷ್ಯದಲ್ಲಿ ಸರಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ತುಂಬಾ ಸಹಾಯವಾಗಲಿದೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video

This site uses Akismet to reduce spam. Learn how your comment data is processed.