ಕುಮಟಾ: ತಾಲೂಕಿನ ಪುರಸಭಾ ವ್ಯಾಪ್ತಿಯ ಕೊಪ್ಪಳಕರವಾಡಿಯಲ್ಲಿ ನಿರ್ಮಾಣವಾಗಲಿರುವ ಶ್ರೀ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ನೂತನ ಕಟ್ಟಡ ಕಾಮಗಾರಿಗೆ ಶಾಸಕ ದಿನಕರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ
ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಮಂಕಾಳು ವೈದ್ಯ ಅವರು ಭೂಮಿಪೂಜೆ ನೆರವೇರಿಸಿದರು. ಟೆಂಡರ್ ಪ್ರಕ್ರಿಯೆಯಲ್ಲಿ ನಿಗದಿ ಪಡಿಸಿದ ಅವಧಿಯಲ್ಲೇ ಉತ್ತಮ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಿ ಕಟ್ಟಡ ಲೋಕಾರ್ಪಣೆಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಕುಮಟಾ ಪುರಸಭೆಯ ಸ್ಥಾಯಿಸಮಿತಿ ಅಧ್ಯಕ್ಷ ಕಿರಣ ಅಂಬಿಗ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಈಶ್ವರ್ ಕಾಂದೂ,
ತಾ. ಪಂ. ಕಾರ್ಯನಿರ್ವಹಣಾಧಿಕಾರಿ ನಾಗರತ್ನ ನಾಯಕ, ಪುರಸಭಾ ಸದಸ್ಯರಾದ ತುಳಸು ಗೌಡ, ಮೋಹಿನಿ ಗೌಡ, ಗೀತಾ ಮುಕ್ರಿ, ಪಲ್ಲವಿ ಮಡಿವಾಳ, ಶೈಲಾ ಗೌಡ, ಅನಿಲ್ ಹರ್ಮಲಕರ್, ಗ್ರಾ. ಪಂ. ಅಧ್ಯಕ್ಷರುಗಳು, ಕೃಷ್ಣಾನಂದ ವೆರ್ಣೇಕರ ಸೇರಿದಂತೆ ಹಲವು ಸಾರ್ವಜನಿಕರು ಈ ಸಂದರ್ಭದಲ್ಲಿ ಹಾಜರಿದ್ದರು.
Leave feedback about this