ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರಿಂದ ಕುಮಟಾದಲ್ಲಿ ಹಾಸ್ಟೆಲ್ ಕಾಮಗಾರಿಗೆ ಗುದ್ದಲಿ ಪೂಜೆ :
ಕುಮಟಾ: ತಾಲೂಕಿನ ಪುರಸಭಾ ವ್ಯಾಪ್ತಿಯ ಕೊಪ್ಪಳಕರವಾಡಿಯಲ್ಲಿ ನಿರ್ಮಾಣವಾಗಲಿರುವ ಶ್ರೀ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ನೂತನ ಕಟ್ಟಡ ಕಾಮಗಾರಿಗೆ ಶಾಸಕ ದಿನಕರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಮಂಕಾಳು ವೈದ್ಯ ಅವರು ಭೂಮಿಪೂಜೆ ನೆರವೇರಿಸಿದರು. ಟೆಂಡರ್ ಪ್ರಕ್ರಿಯೆಯಲ್ಲಿ ನಿಗದಿ ಪಡಿಸಿದ ಅವಧಿಯಲ್ಲೇ ಉತ್ತಮ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಿ ಕಟ್ಟಡ ಲೋಕಾರ್ಪಣೆಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಕುಮಟಾ ಪುರಸಭೆಯ ಸ್ಥಾಯಿಸಮಿತಿ